Connect with us

ಕೊಡಗು

ಉಂಗುರ ನುಂಗಿದ ಮಗು ಮೃತ್ಯು

Published

on

ಮಡಿಕೇರಿ: ಉಂಗುರ ನುಂಗಿದ ಪರಿಣಾಮ ಎಂಟು ತಿಂಗಳ ಗಂಡು ಮಗು ಮೃತಪಟ್ಟಿರುವ ಘಟನೆ ನಡೆದಿದೆ.
ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಡಿಗೋಡು ಗ್ರಾಮದ ಮುನೀರ್ ಎಂಬವರ ಮಗು ಬುಧವಾರ ರಾತ್ರಿ ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಂಗುರ ನುಂಗಿತ್ತು. ತಕ್ಷಣ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದರೂ ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ಸರ್ಜರಿ ಮೂಲಕ ಉಂಗುರವನ್ನು ಹೊರತೆಗೆಯಲು ಸಾಧ್ಯವಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗಿನ ಜಾವ ಮಗು ಮೃತಪಟ್ಟಿದೆ.

Home
Videos
Shop
error: Content is protected !!