ಬೆಂಗಳೂರು
ಬೆಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ಬಿ. ದಯಾನಂದ ನೇಮಕ
ಬೆಂಗಳೂರು: ಬೆಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಹಿರಿಯ ಪೊಲೀಸ್ ಅಧಿಕಾರಿ ಬಿ ದಯಾನಂದ ಅವರನ್ನು ನೇಮಕ ಮಾಡಲಾಗಿದೆ. ಮಂಗಳವಾರ ರಾಜ್ಯ ಸರ್ಕಾರ ಈ ಆದೇಶವನ್ನು ಹೊರಡಿಸಿದೆ.
ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಬೆಂಗಳೂರು ನಗರದ ಪೊಲೀಸ್ ಕಮಿಷನರ್ ಆಗಿ ಪ್ರತಾಪ ರೆಡ್ಡಿ ಕಾರ್ಯನಿರ್ವಾಹಣೆ ಮಾಡಿದ್ದರು. ಇದೀಗ ಅವರನ್ನು ಡಿಜಿಪಿ ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.
ಎಂ ಎ ಸಲೀಂ ಅವರನ್ನು ಸಿಐಡಿ ಡಿಜಿಪಿ (ಕ್ರಿಮಿನಲ್ ತನಿಖೆ), ಶರತ್ ಚಂದ್ರ – ಎಡಿಜಿಪಿ ಗುಪ್ತಚರಕ್ಕೆ ನೇಮಕ ಮಾಡಲಾಗಿದೆ.






