Jobs
ಉದ್ಯೋಗ ಮೇಳ ಮುಂದೂಡಿಕೆ
ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್, 25 ರಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಬೇಕಿದ್ದ ಮಿನಿ ಉದ್ಯೋಗ ಮೇಳವನ್ನು ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವುದರಿಂದ ಮುಂದೂಡಲಾಗಿದೆ.
ಈ ಉದ್ಯೋಗ ಮೇಳವು ಆಗಸ್ಟ್, 29 ರಂದು ಬೆಳಗ್ಗೆ 10.30 ಗಂಟೆಯಿಂದ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ. 08272-225851 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ವಿಮಾ ಅವರು ತಿಳಿಸಿದ್ದಾರೆ.





