Connect with us

ಕರ್ನಾಟಕ

ಲಾರಿಗೆ ಇಂಡಿಕಾ‌ ಕಾರು ಡಿಕ್ಕಿ; ಸ್ಥಳದಲ್ಲಿಯೇ 6 ಮಂದಿ ಸಾವು

Published

on

ಕುಷ್ಟಗಿ (ಕೊಪ್ಪಳ): ಲಾರಿಗೆ ಇಂಡಿಕಾ‌ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನಲ್ಲಿ ನಡೆದಿದೆ.

ಮೃತರನ್ನು ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ, ರಶ್ಮಿಕಾ ಎಂದು ಗುರುತಿಸಲಾಗಿದೆ. ಇವರೆಲ್ಲರೂ ವಿಜಯಪುರಿಂದ ಬೆಂಗಳೂರಿಗೆ ಹೊರಟಿದ್ದರು. ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಕಾರಿನ ಟೈರ್ ಸ್ಪೋಟಗೊಂಡಿದ್ದು, ನಿಯಂತ್ರಣ ತಪ್ಪಿ ಎದುರು ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಈ ಸಂಬಂಧ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Home
Videos
Shop
error: Content is protected !!