Connect with us

ಕರ್ನಾಟಕ

ಮಾಜಿ MLC ಮರಿಲಿಂಗೇಗೌಡ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆ

Published

on

ರಾಮನಗರ (ಆಗಸ್ಟ್ 13): ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್ ಮತ್ತು ಸಚಿವ ಸಿ ಎನ್ ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮರಿಲಿಂಗೇಗೌಡ ಮತ್ತು ಇನ್ನೂ ಹಲವು ಮುಖಂಡರು ಜೆಡಿಎಸ್ ಗೆ ವಿದಾಯ ಹೇಳಿ ಬಿಜೆಪಿ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ತಾಪಂ ಮಾಜಿ ಅಧ್ಯಕ್ಷ ಈರೇಗೌಡ, ಬಮೂಲ್ ಮಾಜಿ ನಿರ್ದೇಶಕ ಮರಿಯಪ್ಪ ಸೇರಿದಂತೆ ಇತರರು ಬಿಜೆಪಿ ಸೇರಿದರು.

ಮರಿಲಿಂಗೇಗೌಡರ ಸೇರ್ಪಡೆಯಿಂದ ರಾಮನಗರ ಜಿಲ್ಲೆಯಲ್ಲಿ ಬಿಜೆಪಿಗೆ ಬಲ ಬಂದಿದೆ ಎಂದು ಸಚಿವ ಅಶ್ವತ್ಥ ನಾರಾಯಣ ಹೇಳಿದರು.

ಮರಿಲಿಂಗೇಗೌಡರು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬೊಮ್ಮಾಯಿಯವರ ಆಡಳಿತ ಕಂಡು ಬಿಜೆಪಿ ಸೇರುತ್ತಿದ್ದೇನೆ.

ದೇಶವನ್ನು ಬಲಿಷ್ಠವಾಗಿ ಕಟ್ಟುವುದು ಮತ್ತು ಪ್ರಜಾಪ್ರಭುತ್ವದ ಉಳಿವು ಬಿಜೆಪಿಯಿಂದ ಮಾತ್ರ ಸಾಧ್ಯ, ಹೀಗಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದೇನೆ ಎಂದರು.

Continue Reading
Home
Videos
Shop
error: Content is protected !!