ಲೋಕಲ್ ನ್ಯೂಸ್
ರಾಜ್ಯ ಮಟ್ಟದ ಶಿಕ್ಷಕ ರತ್ನ ಪ್ರಶಸ್ತಿಗೆ ಆಯ್ಕೆ
ಬೆಂಗಳೂರು: ಕವಿವಾಣಿ ಸಾಹಿತ್ಯ ಪರಿಷತ್ತಿನ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ೨೦೨೩ನೇ ಸಾಲಿನ ಶಾಲಾ ಶಿಕ್ಷಕರಿಗೆ ನೀಡಲಾಗುವ ರಾಜ್ಯ ಮಟ್ಟದ ಶಿಕ್ಷಕ ರತ್ನ ಪ್ರಶಸ್ತಿಗೆ ಓವಿಸ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಕನ್ನಡ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀಮತಿ ಡಾ.ಮಮತ ಹೆಚ್.ಎ ರವರನ್ನು ರಾಜ್ಯಮಟ್ಟದ ಶಿಕ್ಷಕ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆಯೆಂದು ಪರಿಷತ್ತಿನ ಅಧ್ಯಕ್ಷರಾದ ಅಕ್ರಂ ಪಾಶರವರು ತಿಳಿಸಿದ್ದಾರೆ.






